ಬೆಳ್ತಂಗಡಿ: ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಎಂಬಲ್ಲಿ ಏಪ್ರಿಲ್ 7 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಕ್ರೇನ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕ್ರೇನ್ ನಿಯಂತ್ರಣ ತಪ್ಪಿ ಇವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.




























