ಬೆಳ್ತಂಗಡಿ: ತಾಲೂಕಿನ ಧರ್ಮಸ್ಥಳ ಗ್ರಾಮದ ಬೊಳಿಯಾರ್ ಬಳಿ ಏಪ್ರಿಲ್ 11ರಂದು ಬೆಳಿಗ್ಗೆ ಸುಮಾರು 6:30ರ ವೇಳೆಗೆ ಇನೋವಾ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ವ್ಯಕ್ತಿಯನ್ನು ಧರ್ಮಸ್ಥಳ ಗ್ರಾಮದ ದೊಂಡೊಲೆ ನಿವಾಸಿ ಅಶೋಕ್ ಭಟ್ (65) ಎಂದು ಗುರುತಿಸಲಾಗಿದೆ. ಅಪಘಾತದ ಪರಿಣಾಮವಾಗಿ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.




























