ಸುಳ್ಯ: ಶಾಲಾ ರಜಾ ಅವಧಿಯಲ್ಲಿ ಕೆಲಸಕ್ಕೆ ಸೇರಿದ ಅಪ್ರಾಪ್ತ ಬಾಲಕಿಗೆ ಅಂಗಡಿ ಮಾಲೀಕರಿಂದ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿ ದಿನಾಂಕ 01.04.2026ರಂದು ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದಳು. ಮರುದಿನವಾದ 02.04.2026ರಂದು ಬೆಳಿಗ್ಗೆ ಅಂಗಡಿಗೆ ಹಾಜರಾದ ವೇಳೆ ಅಂಗಡಿ ಮಾಲೀಕ ಆಕೆಗೆ ಲೈಂಗಿಕ ಕಿರುಕುಳ ನೀಡಿದನೆಂದು ಆರೋಪಿಸಲಾಗಿದೆ.
ಈ ಕುರಿತು ಬಾಲಕಿ ದಿನಾಂಕ 08.04.2026ರಂದು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಸಂಖ್ಯೆ 50/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 75 ಹಾಗೂ ಪಾಕ್ಸೋ ಕಾಯ್ದೆಯ ಕಲಂ 8 ಮತ್ತು 12ರಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.



























