ವಿಟ್ಲ : ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವೇಳೆ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಂಗಳೂರಿನಲ್ಲಿ ನಡೆದಿದೆ.
ವಿಟ್ಲ ಕಾಶಿಮಠ ನಿವಾಸಿ ಗೋವರ್ಧನ್ ಎಂಬವರ ಪುತ್ರ ಅನಿಕೇತನ್ (13)ಮೃತ ಬಾಲಕ.
ಕೊಪ್ಪದಲ್ಲಿರುವ ಸತ್ಯಸಾಯಿ ವಿದ್ಯಾಸಂಸ್ಥೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದ ಅನಿಕೇತ್ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದನು. ಈ ವೇಳೆ ಶಿಕ್ಷಕರೊಂದಿಗೆ ಈಜಲು ತೆರಳಿದಾಗ ಸಂಜೆ ಸುಮಾರು 2 ಗಂಟೆ ವೇಳೆಗೆ ಅನಿಕೇತ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಜಯಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.




























