ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಎಪ್ರಿಲ್ 11ರಂದು ಸಂಜೆ ತಿಪಟೂರಿನ ನರೇಂದ್ರ ಎಂಬವರು ಸ್ನಾನಘಟ್ಟದ ಬಳಿ ತಮ್ಮ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಸ್ಥಳೀಯರು ಅವರನ್ನು ರಕ್ಷಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



























