ಕಳೆದ ಶನಿವಾರ ರಾತ್ರಿ ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಮೋಹನ್ ಕುಮಾರ್ ಮೃತ ದುರ್ದೈವಿ. ಅವರು ಪದವಿನಂಗಡಿಯಲ್ಲಿ ‘ನವ್ಯ ಸ್ಟುಡಿಯೋ’ ನಡೆಸುತ್ತಿದ್ದರು.
ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿತ್ತು. ಗೋಪಾಲ್ (29) ಎಂಬುವವರು ಚಲಾಯಿಸುತ್ತಿದ್ದ ಬೈಕ್, ಮೋಹನ್ ಕುಮಾರ್ ಅವರ ಸ್ಕೂಟರ್‌ಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ಗೋಪಾಲ್ ರಸ್ತೆಗೆ ಬಿದ್ದಾಗ, ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂರು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿದ ಅವರು ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಮಂಗಳೂರು ಸಂಚಾರಿ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
🧿 ಜಾತ್ರೆಗೆ ಹೊಸ ಬಟ್ಟೆ ಬೇಡ್ವಾ..⁉️ವೆರೈಟಿ ಬಟ್ಟೆ ಕಲೆಕ್ಷನ್ with ಸ್ಪೆಷಲ್ ಆಫರ್ Fashion Zone ನಲ್ಲಿ..‼️




























