ಪುತ್ತೂರು ಸಮೀಪದ ಮುಕ್ರಂಪಾಡಿ ಕೆಎಸ್‌ಆರ್‌ಟಿಸಿ ಡಿಪೋ ಬಳಿ ಏಪ್ರಿಲ್ 26ರಂದು ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ವರದಿಯಾಗಿದೆ.
ಪುತ್ತೂರಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರುಗಳಿಗೆ ಸಾಕಷ್ಟು ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಬೈಕ್ ಸವಾರರ ಕಾಲಿಗೆ ಗಾಯವಾಗಿದ್ದು, ತಕ್ಷಣ ಅವರನ್ನು ಮೆಡಿಲ್ಯಾಂಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ ತನಿಖೆ ಮುಂದುವರಿದಿದೆ.


























