ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಮುಕ್ರಂಪಾಡಿ ನಿವಾಸಿ ಚೈತ್ರ ಪೂಜಾರಿ (35) ಮೃತಪಟ್ಟ ಮಹಿಳೆ.
ಹಠಾತ್ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತಿ, ಮಗಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.



























