ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕರ್ವೇಲ್ ಬಳಿ ನಡೆದಿದೆ.
ಘಟನೆ ಪರಿಣಾಮ ವಾಹನಗಳು ನುಜ್ಜು ಗುಜ್ಜಾಗಿದ್ದು ಆಂಬ್ಯುಲೆನ್ಸ್ ಚಾಲಕನಿಗೆ ಗಾಯಗಳಾಗಿದೆ. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೆರೆದೊಯ್ಯಲಾಗಿದ್ದು ಆಂಬ್ಯುಲೆನ್ಸ್ ನಲ್ಲಿದ್ದವರನ್ನು ಮಂಗಳೂರಿನ ಆಸ್ಪತ್ರೆಗೆ ಬೇರೊಂದು ಆಂಬ್ಯುಲೆನ್ಸ್ ಮೂಲಕ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.



























