ವಿಟ್ಲ: ಇಲ್ಲಿನ ನಾಲ್ಕು ರಸ್ತೆಗಳ ಜಂಕ್ಷನ್ ಬಳಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದು ಸುಮಾರು 50 ಅಡಿಗಳಷ್ಟು ದೂರ ತಳ್ಳಿಕೊಂಡು ಹೋಗಿದೆ.
ಅಪಘಾತದ ತೀವ್ರತೆಗೆ ಹುಂಡೈ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ಓರ್ವ ಮಹಿಳೆ ಮತ್ತು ಬಾಲಕ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.



























