ಮಂಗಳೂರು: ಕಾರು ಚಾಲಕನೊಬ್ಬ ಸರಕಾರಿ ಬಸ್ ಚಾಲಕನ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಆಚಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೈದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಸರಕಾರಿ ಬಸ್‌ನ ಚಾಲಕ ಪಿ.ಜಯರಾಮ ಎಂಬವರಿಗೆ ರಾಷ್ಟ್ರೀಯ ಹೆದ್ದಾರಿ 73ರ ವಳಚ್ಚಿಲ್ ಜಂಕ್ಷನ್‌ನಲ್ಲಿ ಸೈಡ್ ಕೊಡುವ ವಿಚಾರದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























