ರಾಯಚೂರು: ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ಘಟನೆ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅರಗಿನಮರ ಕ್ಯಾಂಪ್‌ನ ವಿದ್ಯಾರ್ಥಿನಿ ಭೂಮಿಕಾ (17) ಮೃತ ದುರ್ದೈವಿ. ಮೇಘನಾ, ಮಹೇಶ್ವರಿ, ಜಹೀದಾ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯರು.
ಕಾಲೇಜು ಮುಗಿದು ವಿದ್ಯಾರ್ಥಿನಿಯರು ಮನೆಗೆ ತೆರಳುತ್ತಿದ್ದರು, ಈ ವೇಳೆ ರಿವರ್ಸ್ ತೆಗೆದುಕೊಳ್ಳುವಾಗ ಚಾಲಕನ ಅಜಾಗೂರಕತೆಯಿಂದ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದಿದೆ. ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಇನ್ನೂ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಸಿಂಧನೂರು ಸಂಚಾರ ಠಾಣೆ ಪೊಲೀಸರು ವಾಹನ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ. ಗಾಯಗೊಂಡ ವಿದ್ಯಾರ್ಥಿನಿಯರಿಗೆ ಖಾಸಗಿ ಆಸ್ಪತ್ರೆ ಚಿಕಿತ್ಸೆ ಮುಂದುವರಿದಿದೆ. ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


























