ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ನಡೆದ ದುರ್ಘಟನೆಯಲ್ಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮೇ 9ರಂದು ಗಾಂಧಿಪಾರ್ಕ್ ಸಮೀಪ ಸಂಭವಿಸಿದೆ.
ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭಾಗವಾಗಿ ಸರ್ವೀಸ್ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ವೇಳೆ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ರೋಡ್ ರೋಲರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಮೃತದೇಹ ನಜ್ಜುಗುಜ್ಜಾಗಿರುವುದಾಗಿ ಮೂಲಗಳು ತಿಳಿಸಿವೆ.
ಮೃತ ವ್ಯಕ್ತಿ ಉತ್ತರ ಭಾರತದ ಮೂಲದ ಕಾರ್ಮಿಕನಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.



























