ವಿಟ್ಲ : ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿ ಎಸ್.ಡಿ.ಎಮ್.ಸಿ ಸಭೆಯು ಜೂ.25 ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ರವಿ ಕೊರತಿಗದ್ದೆ ಯವರು ವಹಿಸಿದರು.
ಎಸ್.ಡಿ.ಎಮ್.ಸಿ ಸದಸ್ಯರ ಉಪಸ್ಥಿತಿಯಲ್ಲಿ ಕೆಲ ವಿಷಯಗಳನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.
- 1ನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಸರಕಾರದ ಅನುಮತಿ ದೊರಕಿದ್ದು, ಅದಕ್ಕಾಗಿ ಪೋಷಕರ ಮನೆ ಭೇಟಿ ಮಾಡಿ ವ್ಯಾಪಕ ಪ್ರಚಾರ ಕೈಗೊಳ್ಳುವುದು.
- ಎಸ್.ಡಿ.ಎಮ್.ಸಿ ಮತ್ತು ಪೋಷಕರ ವಾಟ್ಸಪ್ ಗಳಲ್ಲಿ ಪ್ರಚಾರ ಮಾಡುವುದು.
- 2ನೇ ತರಗತಿಗೂ ಆಂಗ್ಲ ಮಾಧ್ಯಮಕ್ಕೆ ಮಕ್ಕಳನ್ನು ಸೇರಿಸಿಕೊಳ್ಳುವುದು.
- ಮಕ್ಕಳಿಗೆ, ಶಿಕ್ಷಕರಿಗೆ, ಪೋಷಕರಿಗೆ ವ್ಯಾಕ್ಸಿನೇಷನ್ ಕಡ್ಡಾಯ.
- ವಿದ್ಯಾಗಮ ತರಗತಿ ಮಾಡುವುದಾದರೆ ಶಾಲಾ ಆವರಣದಲ್ಲಿ ನಡೆಸುವುದು.
- ದೂರದರ್ಶನ, ರೇಡಿಯೋ, ಮೊಬೈಲ್ ನಲ್ಲಿ ಮಕ್ಕಳಿಗೆ ಪಾಠ ವೀಕ್ಷಿಸಲು ಅವಕಾಶ ಕಲ್ಪಿಸಬೇಕು ಎಂದು ತೀರ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಉಳ್ಳಾಲ್ತಿ ಸೇವಾ ಟ್ರಸ್ಟ್ ಕೇಪು ಇದರ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ದಂಬೆಕಾನ, ಕೇಪು ಪಂಚಾಯತ್ ಸದಸ್ಯರಾದ ಜಗಜ್ಜೀವನ ರಾಂ ಶೆಟ್ಟಿ, ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ತಾರಾನಾಥ ಆಳ್ವ, ಕೇಪು ಪಂಚಾಯತ್ ಸದಸ್ಯ ಪುರುಷೋತ್ತಮ ಗೌಡ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಪುಷ್ಪ ಬಲ್ಲಾಳ್, ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿನ ಮುಖ್ಯ ಶಿಕ್ಷಕಿ ಶ್ರೀಮತಿ ಭಾಗೀರಥಿ ಉಪಸ್ಥಿತರಿದ್ದರು.