ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮೇ 10ರಂದು ಅಪರಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೊಕ್ಕಡದಿಂದ ಉಪ್ಪಿನಂಗಡಿ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬರುತ್ತಿದ್ದ ಸಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಮಹಿಳಾ ಸಹಸವಾರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಬೈಕ್ ಸವಾರ ಅರಸಿನಮಕ್ಕಿ ನಿವಾಸಿ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



























