ಕನಕಮಜಲು ಸಮೀಪ ಕಾರು ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಸುಳ್ಯ ಕಡೆಯಿಂದ ಪುತ್ತೂರು ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದ್ದು,ಘಟನೆಯಿಂದ ಕಾರಿನಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರು ಸೇರಿ ನಾಲ್ವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.



























