ಪುತ್ತೂರು: ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪರ್ಲಡ್ಕ ನಿವಾಸಿ ಶ್ರೀಧರ್ ಮಣಿಯಾನಿ (73) ಅವರು ಹೃದಯಾಘಾತದಿಂದ ಮೇ 10ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಶನಿವಾರ ಅವರು ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಳಿಕ ಕಡಿಮೆ ರಕ್ತದೊತ್ತಡದಿಂದ ಆರೋಗ್ಯ ಸ್ಥಿತಿ ಗಂಭೀರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಮೃತರು ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
























