ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ವೇತಾ ಕೊಟೆನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ಶ್ವೇತ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎನ್ನುವ ಯುವಕನನ್ನ ಪ್ರೀತಿಸುತ್ತಿದ್ದಳು. ಈ ವಿಷಯವನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿ, ನಾಗರಾಜ್‌ನನ್ನು ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಳು. ಆದರೆ ಇದಕ್ಕೆ ಕುಟುಂಬಸ್ಥರು ಒಪ್ಪಿರಲಿಲ್ಲ.
ಇದರಿಂದ ಮನನೊಂದು ವಿಷ ಸೇವಿಸಿ ಶ್ವೇತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























