ಆಲಂಕಾರು: ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಆಲಂಕಾರು ಗ್ರಾಮದ ಕೊಂಡಾಡಿಕೊಪ್ಪ ನಿವಾಸಿ ಜಗದೀಶ ಕುಂಬಾರ (43ವ.) ಎಂಬಾತನ ವಿರುದ್ದ ಕಡಬ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಾಲಕಿ ಏ.28ರಂದು ನೆರೆ ಮನೆಗೆ ಟಿವಿ ನೋಡಲೆಂದು ಹೋಗಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಜಗದೀಶ ಯಾನೆ ಜಗ್ಗ ಬಾಲಕಿಯ ಕೈ ಹಿಡಿದು ಎಳೆದು ಎದೆಗೆ ಕೈ ಹಾಕಿ ಮಾನಭಂಗಕ್ಕೆ ಯತ್ನಿಸಿದ್ದಾಗಿ ಆರೋಪಿಸಿ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


























