ಯು.ಟಿ. ಖಾದರ್ ಅವರಿಗೆ ಗೆರಾವ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಸ್ಪೀಕರ್ ಭದ್ರತಾ ಸಿಬ್ಬಂದಿಯಾಗಿರುವ ಮೊಹಮ್ಮದ್ ಯಾಸಿನ್ ಇನಾಮದಾರ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಘಟನೆ ವೇಳೆ ಖಾದರ್ ಅವರನ್ನು ಗೆರಾವ್ ಮಾಡಿದ ಆರೋಪದಲ್ಲಿ ಮದನಿನಗರ ನಿವಾಸಿ ಜುನೈದ್ ಸೇರಿದಂತೆ ಒಟ್ಟು 11 ಜನರ ವಿರುದ್ಧ FIR ದಾಖಲಿಸಲಾಗಿದೆ.
ಪೊಲೀಸ್ ಅಧಿಕಾರಿಯ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.



























