ಪೆರಾಜೆ ಸಮೀಪ ಮಾಣಿ ಮೈಸೂರು ಹೆದ್ದಾರಿಯಲ್ಲಿ ಬೀಝ ಕಾರೊಂದು ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮೇ 16 ರಂದು ಸಂಜೆ ನಡೆದಿದೆ.
ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಇದಾಗಿದ್ದು ಕಾರಿನಲ್ಲಿ ಚಾಲಕ ಸೇರಿ ಮೂವರು ಪ್ರಯಾಣಿಕರು ಇದ್ದರು ಎನ್ನಲಾಗಿದೆ.
ಈ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣವೇ ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.



























