ಬೆಳ್ತಂಗಡಿ; ಬಸ್ ನಿಲ್ದಾಣನಲ್ಲಿ ಮೇ 18ರಂದು ಮಹಾರಾಷ್ಟ್ರ ಮೂಲದ ಇನ್ನೋವಾ ಕಾರು (MH13 DE1764) ಚಾಲಕ, ತನ್ನ ವಾಹನಕ್ಕೆ ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಶಿವಮೊಗ್ಗ- ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ಚಾಲಕನೊಂದಿಗೆ ವಾಗ್ವಾದ ನಡೆಸಿ, ಬಳಿಕ ಬಸ್‌ನಿಂದ ಎಳೆದು ಹಲ್ಲೆ ನಡೆಸಿದ ಘಟನೆ ನಡೆದಿದೆ.
ಘಟನೆ ನಡೆಯುತ್ತಿದ್ದಂತೆಯೇ ಸ್ಥಳೀಯರು ಸ್ಥಳಕ್ಕೆ ಜಮಾಯಿಸಿ ಇನ್ನೋವಾ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಜನರನ್ನು ಚದುರಿಸಿ, ಇನ್ನೋವಾ ಚಾಲಕ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಚಾಲಕನನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.



























