ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದ ಮನೆಗಳ್ಳತನ ಪ್ರಕರಣಗಳ ತನಿಖೆ ನಡೆಯುತ್ತಿದ್ದು, ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬು ನಿವಾಸಿ ತಂಗಚ್ಚ @ ಮ್ಯಾಧ್ಯೂ @ ಬಶೀರ್ ಎಂಬಾತನ ಮೇಲೆ ಪೊಲೀಸರಿಗೆ ಶಂಕೆ ವ್ಯಕ್ತವಾಗಿದೆ.
ಈತನ ವಿರುದ್ಧ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾಮೀನುರಹಿತ ದಸ್ತಗಿರಿ ವಾರಂಟ್ ಜಾರಿಯಾಗಲು ಬಾಕಿಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಂಕಿತನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಸಾರ್ವಜನಿಕರು ಕೆಳಕಂಡ ಸಂಖ್ಯೆಗಳ ಮೂಲಕ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
ಸಂಪರ್ಕ ಸಂಖ್ಯೆಗಳು:
ಉಪ್ಪಿನಂಗಡಿ ಪೊಲೀಸ್ ಠಾಣೆ
📞 08251-251055 / 9480805362
ಬೆಳ್ತಂಗಡಿ ಪೊಲೀಸ್ ಠಾಣೆ
📞 08256-232093 / 9480805370
ಪುತ್ತೂರು ಪೊಲೀಸ್ ಠಾಣಾ ಉಪನಿರೀಕ್ಷಕರು
📞 08251-230555 / 9480805361
ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ
📞 9480805300 / 0824-2220500
ಸಾರ್ವಜನಿಕರು ಎಚ್ಚರಿಕೆಯಿಂದಿದ್ದು, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ವಿನಂತಿಸಲಾಗಿದೆ.


























