ಬೆಳ್ತಂಗಡಿ: ಏಳು ಜನರ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ನೀರುಪಾಲದ ಘಟನೆ ಬೆಳ್ತಂಗಡಿಯ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ನಡೆದಿದೆ. ಇದೀಗ ಆತನ ಮೃತದೇಹ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಮೇ 19 ರಂದು ಸಂಜೆ 4 ಗಂಟೆ ಸುಮಾರಿಗೆ ಏಳು ಸ್ನೇಹಿತರ ತಂಡ ಈಜಲು ಹೋಗಿ ಓರ್ವ ಬೆಳ್ತಂಗಡಿ ತಾಲೂಕಿನ ಉಜಿರೆ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ (ಈಸಿಎ) ವಿದ್ಯಾರ್ಥಿ ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21ವ) ಎಂಬಾತ ನೀರುಪಾಲಾಗಿದ್ದ.
ನದಿಯಲ್ಲಿ ಯುವಕನ ಮೃತದೇಹ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸಿದ ಬಳಿಕ ರಾತ್ರಿ ಸುಮಾರು 9.40 ರ ವೇಳೆಗೆ ಮೃತದೇಹ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯರು, ಅಗ್ನಿಶಾಮಕ ದಳ, ಶೌರ್ಯ ವಿಪತ್ತು ಪಡೆ ಆಗಮಿಸಿ ಕಾರ್ಯಚರಣೆಯನ್ನು ನಡೆಸಿದ್ದು ಕಡೆಗೂ ಮೃತದೇಹ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.



























