ಕಡಬ: ಮನೆ ಹಂಚು ತೆಗೆಯುವ ವಿಚಾರ ಹಾಗೂ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಉಳಿಪು ಎಂಬಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟ್ರುಪ್ಪಾಡಿ ಗ್ರಾಮದ ಉಳಿಪು ನಿವಾಸಿ ಹಾಗೂ ವೃತ್ತಿಯಲ್ಲಿ ಕೃಷಿಕರಾಗಿರುವ ಶೇಖರ ಗೌಡ (45ವ.) ಹಲ್ಲೆಗೊಳಗಾದವರು. ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿವು ನಿವಾಸಿಗಳಾದ ಸುನೀಲ್ ಮತ್ತು ಬೇಬಿ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























