ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಪುತ್ತೂರಿನಲ್ಲಿ ನಡೆದ ಘಟನೆ ಎಂದು ತಪ್ಪು ಮಾಹಿತಿ ಹರಡಲಾಗುತ್ತಿದೆ. ಈ ಕುರಿತು ಸಂಬಂಧಿತ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸದರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿರುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ವೈರಲ್ ವಿಡಿಯೋದಲ್ಲಿರುವ ಘಟನೆ ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ಪುತ್ತೂರು ಪ್ರದೇಶದಲ್ಲಿ ಸಂಭವಿಸಿರುವುದಾಗಿ ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅಪರಿಶೀಲಿತ ಮಾಹಿತಿಗಳನ್ನು ನಂಬದೇ, ಅಧಿಕೃತ ಮೂಲಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ. ತಪ್ಪು ಮಾಹಿತಿ ಹಂಚಿಕೆ ಮಾಡುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ವರ್ತಿಸುವಂತೆ ಸೂಚಿಸಲಾಗಿದೆ.


























