ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ತಾಜುದ್ದೀನ್ ಸಾಲ್ಮರ, ಉಪಾಧ್ಯಕ್ಷರಾಗಿ ಶಮೀರ್ ನಾಜೂಕು, ಕಾರ್ಯದರ್ಶಿಯಾಗಿ ಇಫಾಝ್ ಬನ್ನೂರು ಅವರು ಆಯ್ಕೆಗೊಂಡಿದ್ದಾರೆ.
ಇತ್ತೀಚೆಗೆ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಹಾಗೂ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರುರವರು ಚುನಾವಣಾ ಪ್ರಕ್ರಿಯೆ ನಡೆಸಿದರು.
ಜೊತೆ ಕಾರ್ಯದರ್ಶಿಯಾಗಿ ಫವಾಝ್ ಬನ್ನೂರು, ಕೋಶಾಧಿಕಾರಿಯಾಗಿ ಸಮೀರ್ ಡಿ.ಕೆ ಹಾಗೂ ಸಮಿತಿ ಸದಸ್ಯರಾಗಿ ರಿಯಾಝ್ ಭೂಮಿ, ಆಶ್ರಫ್ ಗೋಳಿಕಟ್ಟೆ, ರಫೀಕ್ ಬಲ್ನಾಡ್ ಹಾಗೂ ಅಲಿ ಸಾಲ್ಮರ ಆಯ್ಕೆಯಾದರು.ಈ ಸಂದರ್ಭದಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು, ಕಾರ್ಯದರ್ಶಿ ಉಸ್ಮಾನ್ ಎ.ಕೆ., ಇಸ್ಮಾಯಿಲ್ ಕೆಮ್ಮಾಯಿ ಹಾಗೂ ಜೊತೆ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಉಪಸ್ಥಿತರಿದ್ದರು.



























