ಪುತ್ತೂರು: ದ್ವಿಚಕ್ರ ವಾಹನದಲ್ಲಿ ಹೋಟೆಲ್‌ನಿಂದ ತೆರಳಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 30ರಂದು ಸಂಜೆ 4.30ಕ್ಕೆ ಪುತ್ತೂರಿನ ದರ್ಬೆ ಹೆರಿಟೇಜ್ ಫಿಶ್ ಲ್ಯಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಹೋಟೆಲ್‌ನಿಂದ ದ್ವಿಚಕ್ರ ವಾಹನ ಸಮೇತ ತೆರಳಿದ್ದ ಅವರು, ಮನೆಗೂ ಬಾರದೆ, ಸಂಬಂಧಿಕರ ಮನೆಗೂ ತೆರಳದೆ, ಹೋಟೆಲ್‌ಗೂ ಬಾರದೆ ಕಾಣೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಧುಸೂದನ್ ಶೆಣೈ ಅವರ ಬಗ್ಗೆ ಮಾಹಿತಿ ಸಿಕ್ಕವರು ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಪುತ್ತೂರು ನಗರ ಠಾಣೆಗೆ ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.



























