ಪುತ್ತೂರು: ಕುಂಬ್ರದಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದ ಡಾ. ವಿಘ್ನೇಶ್ವ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ವೈದ್ಯಕೀಯ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಪುತ್ತಿಲಪರಿವಾರ ಸೇವಾ ಟ್ರಸ್ಟ್ (ರಿ), ಪುತ್ತೂರು ವತಿಯಿಂದ ಸಹಾಯಧನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್‌ನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಅವರು ಸಹಾಯಧನ ಹಸ್ತಾಂತರಿಸಿ, ಡಾ. ವಿಘ್ನೇಶ್ವ್ ಅವರ ಶೀಘ್ರ ಚೇತರಿಕೆಗೆ ಹಾರೈಸಿದರು.
ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಶ್ರೀರಾಮ್ ಭಟ್ ಪಾತಾಳ ಹಾಗೂ ಪದಾಧಿಕಾರಿಗಳಾದ ಉಮೇಶ್ ಕೋಡಿಬೈಲ್, ಚಂದಪ್ಪ ಮೂಲ್ಯ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಪ್ರೇಮ್ ರಾಜ್ ಆರ್ಲಪದವು, ರಾಜು ಶೆಟ್ಟಿ, ರೂಪೇಶ್, ಸುನಿಲ್ ಬೋರ್ಕರ್, ಅನಿಲ್ ತೆಂಕಿಲ, ಹರೀಶ್ ಭಟ್ ಪುಣಚ, ಸುಜಿತ್ ಕಜೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪುತ್ತಿಲಪರಿವಾರ ಸೇವಾ ಟ್ರಸ್ಟ್ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು, ಅಗತ್ಯವಿರುವವರಿಗೆ ನೆರವು ನೀಡುವ ಮೂಲಕ ಮಾನವೀಯ ಸೇವೆಯನ್ನು ಮುಂದುವರಿಸುತ್ತಿದೆ.




























