ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಸೇರಿದಂತೆ ಪ್ರಮುಖ ಆರು ಮಹತ್ವದ ಘೋಷಣೆಗಳನ್ನ ಮಾಡಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಉದ್ಯೋಗದ ಸಮಸ್ಯೆ ನಿವಾರಣೆ, ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂ. ಹಾಗೂ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ರಿಲೀಫ್ ನೀಡಿದ್ದಾರೆ.
ಇನ್ನು ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ ಮಾಡುವುದಾಗಿ ಡಿಕೆಶಿ ಘೋಷಣೆ ಮಾಡಿದರು.
ಡಿಕೆಶಿಯ ಮೊದಲ ಘೋಷಣೆಗಳು..
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂ. ಘೋಷಣೆ
2,500 ಚದರ ಅಡಿವರೆಗೂ ಒಸಿ ವಿನಾಯಿತಿ. ಇದರೊಂದಿಗೆ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ರಿಲೀಫ್.
ಪ್ರತಿ ಪಂಚಾಯತ್ ಗೂ ಭಾರತ್ ಜೋಡೋ ಯುವಕ ಸಂಘ ಸ್ಥಾಪನೆಗೆ 10 ಸಾವಿರ ರೂಪಾಯಿ ಘೋಷಣೆ.
ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ private employment exchange centre ಸ್ಥಾಪನೆ.
ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ
ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ನೀಡಲಾಗುವುದು ಎಂದು ಘೋಷಿಸಿದರು.
ಇದರೊಂದಿಗೆ ಬೇರೆ ಊರಿಗೆ ಹೋಗಿ ವ್ಯಾಸಂಗ ಮಾಡುವ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇನ್ನು ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ ಮಾಡುವುದಾಗಿ ಡಿಕೆಶಿ ಘೋಷಣೆ ಮಾಡಿದರು.




























