ಗುರುವಾಯನಕೆರೆ: ಇಲ್ಲಿನ ಖಾಸಗಿ ಕಾಲೇಜಿನ ಹಾಸ್ಟೇಲ್‌ನಲ್ಲಿ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತ ವಿದ್ಯಾರ್ಥಿನಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದವರಾಗಿದ್ದು, ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಹಾಸ್ಟೇಲ್‌ನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಗುರುವಾರ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.



























