ಪುತ್ತೂರು: ಬೆದ್ರಾಳ ನಿವಾಸಿ, ಉದ್ಯಮಿ ಹಾಗೂ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರು ಶುಕ್ರವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು.
ಸಾಗರ್ ಇಬ್ರಾಹಿಂ ಹಾಜಿ ಅವರು ಈ ಹಿಂದೆ ಪುತ್ತೂರಿನ ಬಡಕ್ಕೋಡಿ ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರಾಗಿ, ಎಸ್‌ಡಿಪಿಐ ಪುತ್ತೂರು ಘಟಕದ ಅಧ್ಯಕ್ಷರಾಗಿ ಹಾಗೂ ಪುತ್ತೂರು ತಾಲೂಕು ಜಮಿಯ್ಯತುಲ್ ಫಲಾಹ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಸೇವಾ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ, ಪುತ್ರ ಜಸೀನ್ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.



























