ಸುಳ್ಯ: ಕೊಯನಾಡು ಸಮೀಪದ ದೇವರಕೊಲ್ಲಿ ಪ್ರದೇಶದಲ್ಲಿ ಟೋವಿಂಗ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಕೇರಳ ನೋಂದಣಿ ಸಂಖ್ಯೆಯ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ನೆರವಿಗೆ ಧಾವಿಸಿದ್ದಾರೆ. ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಗಾಯಗೊಂಡ ಸವಾರನ ಗುರುತು ಹಾಗೂ ಇತರ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಸ್ಥಳೀಯರು ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಗಾಯಾಳುವಿಗೆ ಸಮಯೋಚಿತ ಚಿಕಿತ್ಸೆ ದೊರಕುವಂತಾಗಿದೆ.



























