ಸುಳ್ಯ: ಸುಳ್ಯದ ಜಟ್ಟಿಪಳ್ಳ ನಿವಾಸಿ ಹಾಗೂ ಕುಕ್ಕುಜಡ್ಕದಲ್ಲಿ ಕ್ಷೌರಿಕ ವೃತ್ತಿ ನಡೆಸುತ್ತಿದ್ದ ಉಮೇಶ್ ಜಟ್ಟಿಪಳ್ಳ (32) ಅವರು ಇಂದು ಮುಂಜಾನೆ ನಿಧನರಾದರು.
ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಉಮೇಶ್ ಅವರು ಕಳೆದ ಶನಿವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷಯ ತಿಳಿದ ಕುಟುಂಬಸ್ಥರು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಎರಡು ದಿನಗಳ ಹಿಂದೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರು ತಾಯಿ, ಸಹೋದರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಘಟನೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



























