ಸುಳ್ಯ: ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಆಟೋರಿಕ್ಷಾ ಡಿಕ್ಕಿ ಹೊಡೆದ ಘಟನೆ ಜೂನ್ 7ರಂದು ಮುಂಜಾನೆ ಸುಳ್ಯ ಸರ್ಕಾರಿ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಅಪಘಾತದಲ್ಲಿ ಎರಡೂ ವಾಹನಗಳಿಗೆ ಸಣ್ಣಪುಟ್ಟ ಹಾನಿಯಾಗಿದ್ದು, ಯಾವುದೇ ಗಂಭೀರ ಗಾಯಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಘಟನೆಯ ಪರಿಣಾಮವಾಗಿ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿ, ಟ್ರಾಫಿಕ್ ಜಾಮ್ ನಿರ್ಮಾಣವಾಗಿತ್ತು. ಬಳಿಕ ವಾಹನಗಳನ್ನು ತೆರವುಗೊಳಿಸಿದ ನಂತರ ಸಂಚಾರವು ಸಹಜ ಸ್ಥಿತಿಗೆ ಮರಳಿತು.



























