ಪುತ್ತೂರು :-ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಬಲ್ನಾಡ್, ಎಸ್ ಡಿ ಎಂ ಸಿ ಆಡಳಿತ ಮಂಡಳಿ ಹಾಗೂ ಹಳೇ ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳ ಸಂಘ ಉಜ್ರುಪಾದೆ ಬಲ್ನಾಡ್ ಇದರ ಜಂಟಿ ಆಶ್ರಯದಲ್ಲಿ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.
ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ ಸಲಹೆಗಳನ್ನು ನೀಡಲಾಯಿತು.
ಸಾರ್ವಜನಿರು ಶಿಬಿರದ ಪ್ರಯೋಜನ ಪಡೆದುಕೊಂಡರು.
ವೈದ್ಯರ ತಂಡವು ರೋಗಿಗಳಿಗೆ ಅಗತ್ಯ ಸಲಹೆಗಳನ್ನು ನೀಡುವುದರ ಜೊತೆಗೆ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ವಿವರಿಸಿದರು . ಅಗತ್ಯವಿರುವ ಕೆಲವರಿಗೆ ಮುಂದಿನ ಚಿಕಿತ್ಸೆಗೆ ಆಸ್ಪತ್ರೆಗೆ ಭೇಟಿ ನೀಡುವಂತೆ ಸೂಚಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘ ಸಂಸ್ಥೆಗಳ ಪದಾಧಿಕಾರಿಗಳು , ವೈದ್ಯರು, ಸ್ವಯಂಸೇವಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಶಿಬಿರದ ಯಶಸ್ಸಿಗೆ ಸಹಕರಿಸಿದ ವೈದ್ಯಕೀಯ ಸಿಬ್ಬಂದಿ, ದಾನಿಗಳು ಹಾಗೂ ಸ್ವಯಂಸೇವಕರಿಗೆ ಸಂಘಟಕರು ಕೃತಜ್ಞತೆ ಸಲ್ಲಿಸಿದರು.



























