ಮಡಿಕೇರಿ: ಕೊಡಗಿನ (Kodagu) ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಮೈಸೂರಿನ (Mysuru) ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ (27) ಮೃತ ದುರ್ದೈವಿ.
ಕೊಡಗಿಗೆ ಪ್ರವಾಸ ಬಂದಿದ್ದ ಈಕೆ ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೆ ಅಲ್ಲಿ ತಂಗಿದ್ದರು. ಇಂದು ಬೆಳಗ್ಗೆ ಸ್ನಾನ ಮಾಡಲು ಬಾತ್‌ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಬಾತ್‌ರೂಮಿನಲ್ಲಿ ಕಿಟಕಿ ಇರಲಿಲ್ಲವೆಂದು ಹೇಳಲಾಗಿದೆ. ಘಟನೆ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



























