ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ನಡೆದಿದೆ.
ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಸಂಪೂರ್ಣ ಛಿದ್ರವಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನ ಹೊಸಕೋಟೆಯ ಸರ್ಕಾರಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಹೊಸಕೋಟೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



























