ಮಚ್ಚಿನ, ಜೂನ್ 8: ಬಳ್ಳಮಂಜ–ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಆಕ್ಟಿವಾ ಸ್ಕೂಟರ್ ಹಾಗೂ ಪಿಕಪ್ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.
ಅಪಘಾತದಲ್ಲಿ ಆಕ್ಟಿವಾದ ಹಿಂಬದಿ ಸವಾರ ಚಂದಪ್ಪ ಮೂಲ್ಯ ಅವರು ತಲೆಗೆ ಹಾಗೂ ದೇಹಕ್ಕೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರ ಡಾಕಯ್ಯ ಗೌಡ ಅವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಮೃತಪಟ್ಟಿದ್ದಾರೆ.
ಮಡಂತ್ಯಾರಿನ ಶಾಮಿಯಾನ ಸಂಸ್ಥೆಗೆ ಸೇರಿದ ಪಿಕಪ್ ವಾಹನವು ಬಳ್ಳಮಂಜದಿಂದ ಪಣಕಜೆ ಕಡೆಗೆ ಸಾಗುತ್ತಿತ್ತು. ಇದೇ ವೇಳೆ ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ಆಕ್ಟಿವಾ ಸ್ಕೂಟರ್‌ಗೆ ಪಾಲ್ಯರ ಬಳಿ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



























