ಉಜಿರೆಯ ಕಾಶಿಬೆಟ್ಟು ಪ್ರಗತಿ ನಗರದಲ್ಲಿ ಇಂದು ಮುಂಜಾನೆ ಕಾರೊಂದು ರಸ್ತೆ ಬದಿಯ ಆಳವಾದ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ನಡೆದಿದೆ.
ಮೂವರು ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ. ಅಪಘಾತದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯರ ಸಹಾಯದಿಂದ ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.


























