ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎನ್‌ಡಿಪಿಎಸ್ ಕಾಯ್ದೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ 6ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅ.ಕ್ರ.116/2026ರಡಿ ಕಲಂ 8(ಸಿ) ಹಾಗೂ 22(ಸಿ) ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಪ್ರಣಮ್ ಕೋಟ್ಯಾನ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು.
ಪ್ರಕರಣದ ಮುಂದಿನ ತನಿಖೆ ವೇಳೆ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಸುಶಾನ್ ಪೂಜಾರಿ (27), ಲೋಹಿತಾಶ್ವ ಅವರ ಪುತ್ರ, ನಳಂದ ಶಾಲೆ ಸಮೀಪದ ಕಾರ್ ಸ್ಟ್ರೀಟ್, ಮಂಗಳೂರು ನಿವಾಸಿ ಎಂಬಾತನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೂನ್ 9ರಂದು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ಹಾಗೂ ಕೂಲಂಕುಷ ತನಿಖೆ ನಡೆಸುವ ಉದ್ದೇಶದಿಂದ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.



























