ಧರ್ಮಸ್ಥಳ ಗ್ರಾಮದ ನೇತ್ರಾವತಿ ಸೇತುವೆ ಸಮೀಪದ ಅರಣ್ಯ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಹಾಗೂ ಬಟ್ಟೆಗಳು ಸಾರ್ವಜನಿಕರಿಗೆ ಪತ್ತೆಯಾಗಿವೆ.
ಸ್ಥಳೀಯರು ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಂಗಳೂರಿನ ಆಸ್ಪತ್ರೆಯ ವೈದ್ಯರ ತಂಡ ಸ್ಥಳಕ್ಕೆ ಆಗಮಿಸಿ ಸ್ಥಳದಲ್ಲೇ ಶವಪರೀಕ್ಷೆ ನಡೆಸಿದೆ.
ಅನಂತರ ಧರ್ಮಸ್ಥಳ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಅಸ್ಥಿಪಂಜರವನ್ನು ರುದ್ರಭೂಮಿಯಲ್ಲಿ ದಫನ ಮಾಡಲಾಗಿದೆ.
ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಗುರುತು ಹಾಗೂ ಸಾವಿನ ಕಾರಣ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



























