ಪುತ್ತೂರು: ಮೆಡ್‌ಲ್ಯಾಂಡ್ ಫೌಂಡೇಶನ್ ಸಹಯೋಗದೊಂದಿಗೆ ಮೆಡ್‌ಲ್ಯಾಂಡ್
ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.11ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ವಿವಿಧ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9 ಗಂಟೆಯಿಂದ ನಡೆಯಲಿರುವ ಶಿಬಿರದಲ್ಲಿ ಬೃಹತ್ ರಕ್ತದಾನ ಶಿಬಿರ, ಫ್ಯಾಟಿ ಲಿವರ್ ಪತ್ತೆ ಹಾಗೂ ಯಕೃತ್ತಿನ ಆರೋಗ್ಯ ಮೌಲ್ಯಮಾಪನಕ್ಕಾಗಿ ಉಚಿತ ಫೈಟ್ರೋಸ್ಕ್ಯಾನ್ ತಪಾಸಣೆ, ಸಂತಾನೋತ್ಪತ್ತಿ ಸಮಸ್ಯೆಗಳ ತಪಾಸಣೆ ಮತ್ತು ತಜ್ಞರ ಮಾರ್ಗದರ್ಶನದೊಂದಿಗೆ ಉಚಿತ ಬಂಜೆತನ ತಪಾಸಣಾ ಶಿಬಿರ ಹಾಗೂ ನೇತ್ರ ತಜ್ಞರಿಂದ ಉಚಿತ ಕಣ್ಣಿನ ಪರೀಕ್ಷೆ ಮತ್ತು ಸಲಹೆ ಕಾರ್ಯಕ್ರಮಗಳು ನಡೆಯಲಿವೆ.
ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚುವುದು, ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಹಾಗೂ ಸುಲಭವಾಗಿ ವೈದ್ಯಕೀಯ ಸೇವೆಗಳನ್ನು ತಲುಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.



























