ಸುಳ್ಯದ ಹೆಸರಾಂತ ಇಎನ್‌ಟಿ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿ ಕು. ಅಭಿಜ್ಞಾ ಭಟ್ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಜೂನ್ 10ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 19 ವರ್ಷ ವಯಸ್ಸಾಗಿತ್ತು.
ಅಭಿಜ್ಞಾ ಭಟ್ ಅವರು ಇತ್ತೀಚೆಗೆ ಪಿಯುಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದು, 595 ಅಂಕಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಐದನೇ ರ್ಯಾಂಕ್ ಪಡೆದು ಗಮನ ಸೆಳೆದಿದ್ದರು.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಅವರ ಅಕಾಲಿಕ ನಿಧನ ಕುಟುಂಬಸ್ಥರು, ಬಂಧು-ಬಳಗ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ದುಃಖದ ವಾತಾವರಣ ಮೂಡಿಸಿದೆ.
ಮೃತರು ತಂದೆ ಡಾ. ರವಿಶಂಕರ್, ತಾಯಿ ಶ್ರೀಮತಿ ಅನುಪಮ, ಸಹೋದರಿ ಕು. ಅನುಜ್ಞ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ವಿವಿಧ ಗಣ್ಯರು, ಸ್ನೇಹಿತರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.



























