ಗಡಿಯಾರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಗಡಿಯಾರ ದಲ್ಲಿ ನಡೆದಿದೆ.
ಅಪಘಾತದ ತೀವ್ರತೆಗೆ ಕಾರು ಎರಡು ಪಲ್ಟಿಯಾಗಿದ್ದು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು ಚಾಲಕನಿಗೆ ಗಂಭೀರ ಗಾಯಗಳಾಗಿದೆ. ಆತನನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

























