ದಾವಣಗೆರೆ: ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿ ಗ್ರಾಮವೊಂದರಲ್ಲಿ ಜೂ.3 ರಂದು ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣದ ಮತ್ತೊಬ್ಬ ಆರೋಪಿ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೋರ್ವನನ್ನು ರಿಮ್ಯಾಂಡ್ ಹೋಂಗೆ ದಾಖಲಿಸಲಾಗಿದೆ.
ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಜೂ.3 ರಂದು ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವಾಪಟ್ಟಣ ಪೊಲೀಸರು ಮಂಗಳವಾರದಂದೇ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ 10 ಜನರನ್ನು ಬಂಧಿಸಿದ್ದರು.
9 ಜನ ಆರೋಪಿತರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ನಂತರ ದಾವಣಗೆರೆಯ ಸರ್ಕಾರಿ ಹೈಸ್ಕೂಲ್ ಮೈದಾನ ಸಮೀಪದ 1ನೇ ಹೆಚ್ಚುವರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸ ಲಾಯಿತು.
9 ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಎಲ್ಲ ಆರೋಪಿ ಗಳನ್ನು ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಜೂ.3 ರಂದು ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ವಿಡಿಯೋ ಮಾಡಿಕೊಂಡಿದ್ದಂತಹ ಆರೋಪಿಗಳು ಕೆಲ ದಿನಗಳ ಹಿಂದೆಯಷ್ಟೇ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ ವಿಷಯ ಹರಡುತ್ತಿದ್ದಂತೆಯೇ ಸಿಕ್ಕಿ ಬೀಳಬಹುದು ಎಂಬ ಕಾರಣಕ್ಕೆ ವಿಡಿಯೋ, ಫೋಟೋ ಡಿಲಿಟ್ ಮಾಡಿ, ಸಾಕ್ಷ್ಯನಾಶಕ್ಕೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯಲು ಪೊಲೀಸ್ ಇಲಾಖೆ ಮುಂದಾಗಿದೆ.



























