ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಪುಣಿಕೆದಡಿ ಮನೆ ನಿವಾಸಿ ವಸಂತ ಗೌಡ (48) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಜೂನ್ 4ರಂದು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಸುಮಾರು ಹತ್ತು ವರ್ಷಗಳ ಹಿಂದೆಯೇ ಪತ್ನಿ ಮಗನೊಂದಿಗೆ ತವರು ಮನೆಗೆ ತೆರಳಿದ್ದರು ಎನ್ನಲಾಗಿದೆ. ಬಳಿಕ ವಸಂತ ಗೌಡರು ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಜೀವನದಲ್ಲಿ ನೊಂದು ಅವರು ಈ ಕೃತ್ಯ ಎಸಗಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


























