ಬಂಟ್ವಾಳ: ಎನ್‌ಡಿಪಿಎಸ್ ಪ್ರಕರಣದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯ ಅ.ಕ್ರ. 309/2017ರ ಕಲಂ 8(c), 27(B) ಎನ್‌ಡಿಪಿಎಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಬಂಟ್ವಾಳ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ (41) ಎಂಬಾತನು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆರೋಪಿಯ ಇರುವಿಕೆಯ ಕುರಿತು ಮಾಹಿತಿ ಸಂಗ್ರಹಿಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಸಿಬ್ಬಂದಿಗಳಾದ ಪಿ.ಸಿ. 2456 ಶ್ರೀಕಾಂತ್ ಹಾಗೂ ಪಿ.ಸಿ. 2468 ಅರುಣ್ ಅವರು ಜೂನ್ 12ರಂದು ವಗ್ಗ ಪ್ರದೇಶದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

























