ಪುತ್ತೂರು: ಪುತ್ತೂರು ನಗರ ಠಾಣಾ ವ್ಯಾಪ್ತಿಯ ಅ.ಕ್ರ.100/2015 ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರಕರಣವು ಭಾರತೀಯ ದಂಡ ಸಂಹಿತೆಯ ಕಲಂ 447, 427, 504 ಹಾಗೂ 506ರಡಿ ದಾಖಲಾಗಿದ್ದು, ಆರೋಪಿ ಸ್ವರೂಪ್ @ ಸ್ವರೂಪ್ ಅಮೀನ್ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.
ಆರೋಪಿಯ ಸುಳಿವು ಪತ್ತೆಹಚ್ಚಿದ ಪುತ್ತೂರು ನಗರ ಠಾಣೆ ಪೊಲೀಸರು ಕೇರಳ ರಾಜ್ಯದ ಮಂಜೇಶ್ವರದ ಪಾವೂರು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದರು. ಬಳಿಕ ಆರೋಪಿಯನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


























