ಉಜ್ರುಪಾದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ಡಿಸ್ಟ್ರಿಕ್ಟ್ ಗ್ರಾಂಟ್ ಯೋಜನೆಯಡಿ ಸುಮಾರು ₹1 ಲಕ್ಷ ಮೌಲ್ಯದ ಪೀಠೋಪಕರಣಗಳನ್ನು ಹಸ್ತಾಂತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ ಅಧ್ಯಕ್ಷರಾದ ರೋಟೇರಿಯನ್ ಕುಸುಮ್ ರಾಜ್ ಎಸ್.ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಸಿಸ್ಟೆಂಟ್ ಗವರ್ನರ್ ಪ್ರಮೀಳಾ ರಾವ್, ಡಿಸ್ಟ್ರಿಕ್ಟ್ ಚೇರ್ಮನ್ ರೋ. ಆಸ್ಕರ್ ಆನಂದ್, ಝೋನಲ್ ಲೆಫ್ಟಿನೆಂಟ್ ರೋ. ಭರತ್ ಪೈ, ಝೋನಲ್ ಲೆಫ್ಟಿನೆಂಟ್ ರೋ. ಪಶುಪತಿ ಶರ್ಮ, ಕೌನ್ಸಿಲರ್ ಶ್ರೀಮತಿ ಪೂರ್ಣಿಮಾ, ಪ್ರೆಸಿಡೆಂಟ್ ಎಲೆಕ್ಟ್ ವಚನಾ ಜಯರಾಂ, ಪೂರ್ವ ಅಸಿಸ್ಟೆಂಟ್ ಗವರ್ನರ್ ನರಸಿಂಹ ಪೈ, ಪೂರ್ವ ಅಧ್ಯಕ್ಷೆ ರೋ. ಅಶ್ವಿನಿ ಕೃಷ್ಣ ಮುಳಿಯ, ಗ್ರಾಮ ಪಂಚಾಯತ್ ಸದಸ್ಯ ಬಾಲಸುಬ್ರಹ್ಮಣ್ಯ, SDMC ಅಧ್ಯಕ್ಷ ರಾಧಾಕೃಷ್ಣ ಪೂಜಾರಿ, ಹಿರಿಯ ವಿದ್ಯಾರ್ಥಿ ಮತ್ತು ವಿದ್ಯಾಭಿಮಾನಿಗಳ ಸಂಘದ ಉಪಾಧ್ಯಕ್ಷ ಹರೀಶ್ ರಾಂಬೈಲು ಹಾಗೂ ಶ್ರೀಮತಿ ಲಿಖಿತ ಕುಸುಮ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ರೋ. ಅಭೀಷ್ ಕೆ., ವಿನಾಯಕ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯರು, ಕಟ್ಟೆ ಫ್ರೆಂಡ್ಸ್ ತಂಡದ ಸದಸ್ಯರು, ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
ಅತಿಥಿಗಳು ಶಿಕ್ಷಣ ಕ್ಷೇತ್ರಕ್ಕೆ ಪೂರಕವಾದ ಈ ಸೇವಾ ಕಾರ್ಯವನ್ನು ಶ್ಲಾಘಿಸಿ, ಸಮಾಜದ ಅಭಿವೃದ್ಧಿಯಲ್ಲಿ ರೋಟರಿಯ ಸೇವೆಯನ್ನು ಪ್ರಶಂಸಿಸಿದರು. ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಪೀಠೋಪಕರಣಗಳನ್ನು ಹಸ್ತಾಂತರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಭವಾನಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಅಧ್ಯಾಪಕರಾದ ಮಂಜಪ್ಪ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕೊನೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಯುವದ ಕಾರ್ಯದರ್ಶಿ ರೋ. ಅಭೀಷ್ ಕೆ. ವಂದಿಸಿದರು.
ಕಾರ್ಯಕ್ರಮವು ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಯಿತು. ರೋಟರಿ ಕ್ಲಬ್ ಪುತ್ತೂರು ಯುವವು ಮುಂದೆಯೂ ಸಮಾಜಮುಖಿ ಯೋಜನೆಗಳನ್ನು ಕೈಗೊಳ್ಳುವ ಸಂಕಲ್ಪ ವ್ಯಕ್ತಪಡಿಸಿತು.


























